ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ

0

ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ದಲ್ಲಿ ಮಕ್ಕಳ ದಿನಾಚರಣೆ ಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಹರಲಾಲ್ ನೆಹರು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ದೀಪ ಬೆಳಗಿಸಿ ಪ್ರಾರಂಭಿಸಲಾಯಿತು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ. ವಹಿಸಿದರು. ವಿದ್ಯಾರ್ಥಿ ಸಂಘದ ನಾಯಕ ಜೋಯ್ಸ್ಟನ್ ಕ್ರಾಸ್ತ ಮತ್ತು ಕಾರ್ಯದರ್ಶಿ ಗೋಪಾಲಕೃಷ್ಣ ಅತಿಥಿಯಾಗಿ ವಿದ್ಯಾರ್ಥಿ ಗಳನ್ನು ಉದ್ದೇಶಿಸಿ ಮಾತನಾಡಿದರು. ಇತಿಹಾಸ ಉಪನ್ಯಾಸಕರಾದ ಪ್ರಸನ್ನ ಎನ್. ಹೆಚ್ ರವರು ಮುಖ್ಯ ಭಾಷಣಕಾರರಾಗಿ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಲವಾರು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ಎಲ್ಲರನ್ನು ಮನರಂಜಿಸಿದರು.

ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ ಎನ್ ರವರು ಸ್ವಾಗತಿಸಿ, ಸಮಾಜಶಾಸ್ತ್ರ ಉಪನ್ಯಾಸಕರಾದ ಬಾಲಕೃಷ್ಣ ಕೆ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಕು. ಮೇಘ ರವರು ಕಾರ್ಯಕ್ರಮ ನಿರೂಪಿಸಿದರು.