ಗೋಂದೋಳು ಪೂಜೆ ಕುರಿತ ಪುಸ್ತಕ ಬಿಡುಗಡೆ ಸಮಾರಂಭದ ಆಮಂತ್ರಣ ಬಿಡುಗಡೆ

ಮರಾಟಿ ಸಮಾಜ ಸೇವಾ ಸಂಘ ಸುಳ್ಯ ಇದರ ಆಶ್ರಯದಲ್ಲಿ ಮರಾಟಿ ಮಹಿಳಾ ವೇದಿಕೆ ಮತ್ತು ಮಹಿಳಾ ಯುವ ವೇದಿಕೆ ಇದರ ಸಹಕಾರದೊಂದಿಗೆ ಸಮಾಜದ ಕಲ್ಯಾಣಕ್ಕೋಸ್ಕರ ಗಣಪತಿ ಹವನ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜೆ ನ.16 ರಂದು ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.















ಬೆಳಿಗ್ಗೆ ಗಣಪತಿ ಹವನ, ಬಳಿಕ ಸತ್ಯನಾರಾಯಣ ಪೂಜೆ ನಡೆದು, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಮಹಿಳಾ ವೇದಿಕೆಯವರು ಮತ್ತು ಸಮಾಜ ಬಾಂಧವರು ಭಜನೆ ನಡೆಸಿಕೊಟ್ಟರು. ಶಿವಕುಮಾರ್ ಭಟ್ ಎಡಮಂಗಲ ಮತ್ತು ಬಳಗದವರು ಪೂಜಾ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಡಿ.7 ರಂದು ಬಿಡುಗಡೆಗೊಳ್ಳಲಿರುವ ಮರಾಟಿಗರ ಗೋಂದೋಳು ಪೂಜೆ ಹಿನ್ನಲೆ, ಆಚರಣೆಯ ವಿಧಿವಿಧಾನಗಳು, ಇತರ ಪ್ರಮುಖ ಆಚರಣೆಗಳು ಪುಸ್ತಕ ಬಿಡುಗಡೆ ಸಮಾರಂಭದ ಆಮಂತ್ರಣ ವನ್ನು ಬಿಡುಗಡೆಗೊಳಿಸಲಾಯಿತು. ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸುರೇಶ್ ಎಂ. ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳು, ಪ್ರಸಕ್ತ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸದಸ್ಯರು, ಧಾರ್ಮಿಕ ಚಿಂತನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.










