ಸುಳ್ಯದ ಸಂತ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ನ.14 ರಂದು ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವೇದಿಕೆಯಲ್ಲಿ ಸಂಸ್ಥೆಯ ಜೊತೆ ಕಾರ್ಯದರ್ಶಿ ಗೌರವಾನ್ವಿತ ಫಾದರ್ ಆಲ್ವಿನ್ ಎಡ್ವರ್ಡ್ ಡಿ ಕುನ್ಹಾ, ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ, ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿಯಾದ ಶ್ರೀಮತಿ ಜೂಲಿಯಾನ ಕ್ರಾಸ್ತಾ, ಪೂರ್ವ ಪ್ರಾಥಮಿಕ ವಿಭಾಗದ ಪಿ ಟಿ ಎ ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್, ಹಿರಿಯ ಪ್ರಾಥಮಿಕ ವಿಭಾಗದ ಉಪಾಧ್ಯಕ್ಷರಾದ ಶ್ರೀಮತಿ ಸುನಿತಾ ಮೊಂತೆರೊ, ಪ್ರೌಢಶಾಲಾ ವಿಭಾಗದ ಉಪಾಧ್ಯಕ್ಷರಾದ ಶ್ರೀಮತಿ ಸುಮಲತಾ, ವಿದ್ಯಾರ್ಥಿ ನಾಯಕರುಗಳಾದ ಸಾಯಿ ನಕ್ಷತ್ರ ಎಮ್ ಆರ್, ಧನುಷ್ ,ಅನೀಂದ್ರಿತ
ವೇದಿಕೆಯಲ್ಲಿ ಉಪಸ್ಥಿತರಿದ್ದರು.









ಗುರುಗಳಾದ ಆಲ್ವಿನ್ ಎಡ್ವರ್ಡ್ ಡಿಕುನ್ಹಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಹ ಶಿಕ್ಷಕಿ ಶ್ರೀಮತಿ ಮಮತಾ ಮಕ್ಕಳ ದಿನಾಚರಣೆಯ ಕುರಿತು ಭಾಷಣ ಮಾಡಿದರು.
ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ವಿವಿಧ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಮಕ್ಕಳ ದಿನಾಚರಣೆಯ ಕುರಿತು ಮಾತನಾಡಿ ಎಲ್ಲ ವಿದ್ಯಾರ್ಥಿಗಳನ್ನು ಶುಭ ಹಾರೈಸಿದರು. ಶಾಲಾ ಪಿಟಿಎ ಉಪಾಧ್ಯಕ್ಷರುಗಳಾದ ಶ್ರೀಮತಿ ಸುನಿತಾ ಮೊಂತೆರೊ, ಶ್ರೀ ಪ್ರವೀಣ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಂಸ್ಥೆಯ ಜೊತೆ ಕಾರ್ಯದರ್ಶಿಯಾದ ವಂದನೀಯ ಫಾದರ್ ಆಲ್ವಿನ್ ಎಡ್ವರ್ಡ್ ಡಿಕುನ್ಹಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆಯ ಮೂಲಕ ಶುಭ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕ ಶಿಕ್ಷಕಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸಹ ಶಿಕ್ಷಕಿ ಶ್ರೀಮತಿ ಸ್ಟೆಪಿಲ್ಲಾ ಸ್ವಾಗತಿಸಿ, ಶ್ರೀಮತಿ ಚೇತನ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.









