ನಡುಗಲ್ಲು: ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಕ್ಷಣ ಇಲಾಖೆ, ಶಿಕ್ಷಣ ಇಲಾಖೆ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ವತಿಯಿಂದ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲಿನಲ್ಲಿ ಗುತ್ತಿಗಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಸಭಾಧ್ಯಕ್ಷತೆಯನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಿವರಾಮಗೌಡ ಉತ್ರಂಬೆ ವಯಿಸಿದ್ದರು. ವೇದಿಕೆಯಲ್ಲಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷೆ ಶ್ರೀಮತಿ ನಿರ್ಮಲ ಪದ್ಮನಾಭ ಪರಮಲೆ, ಮೃತ್ಯುಂಜೇಶ್ವರ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ರಾಮಚಂದ್ರ ಭಟ್ ಉಬರಡ್ಕ, ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಕುಮಾರ್ ಚರ್ಮತ, ಹರೀಶ್ ಕೊಯಿಲ, ಶ್ರೀಮತಿ ಪ್ರಮೀಳಾ ಎರದಡ್ಕ, ಲೀಲಾವತಿ, ಅಂಜೇರಿ ಶಿಕ್ಷಕರ ಸಂಘದ ಕಾರ್ಯದರ್ಶಿ ಕುಶಾಲಪ್ಪ ಗೌಡ, ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕ್ಲಸ್ಟರ್ ಮಟ್ಟದ ಸಮೂಹ ಸಂಪನ್ಮೂಲ ವ್ಯಕ್ತಿ, ಕುಶಾಲಪ್ಪಗೌಡ ತುಂಬ ತಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವನಜಾಕ್ಷಿ ಮೂಕಮಲೆ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಗುತ್ತಿಗಾರು ಕ್ಲಸ್ಟರ್ ಮಟ್ಟದ ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಚಿತ್ರ ವರದಿ ಡಿ ಹೆಚ್‌