ಸಂಪಾಜೆ ಪ್ರೌಢ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0

ಕೂಡಿಗೆಯಲ್ಲಿ ನ.15 ರಂದು ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಗ್ರೀತೇಶ್ ಕೆ.ಪಿ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಪ್ರಥಮ, ಗ್ರೀಷ್ಮಾ ಕೆ.ಪಿ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಮುಖೇಶ್ ಎಂ. ಹೆಚ್. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮುಂದೆ ಬಾಗಲಕೋಟೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಾಲಾ ದೈಹಿಕ ಶಿಕ್ಷಕರಾದ ಕೆ. ಕುಶಾಲಪ್ಪರವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು, ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಬೋಧಕ-ಬೋಧಕೇತರರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿ, ರಾಜ್ಯ ಮಟ್ಟಕ್ಕೆ ಶುಭ ಹಾರೈಸಿದ್ದಾರೆ.