ಆರು ಮಂದಿ ಹಿರಿಯ ಸಹಕಾರಿಗಳಿಗೆ ಸನ್ಮಾನ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸುಳ್ಯ ತಾಲೂಕು ಸಹಕಾರಿ ಯೂನಿಯನ್, ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಇತರ ಸಹಕಾರ ಸಂಘಗಳ ಸಹಕಾರದೊಂದಿಗೆ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಾಲ್ಸೂರು ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವು ನ.20ರಂದು ಜಾಲ್ಸೂರು ವಿನೋಬಾನಗರ ವಿವೇಕಾನಂದ ವಿದ್ಯಾ ಸಂಸ್ಥೆಗಳ ರಜತ ಕಿರಣ ಸಭಾಂಗಣದಲ್ಲಿ ನಡೆಯಲಿದೆ.
ವಾಹನ ಜಾಥಾ : ಬೆಳಗ್ಗೆ9 ಕ್ಕೆ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಾಲ್ಸೂರು ಇದರ ಪ್ರಧಾನ ಕಚೇರಿಯಲ್ಲಿ ಕಾರ್ಯಕ್ರಮಕ್ಕೆ ಕನಕಮಜಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಪ್ರಸಾದ್ ಭಟ್ ಜಿ. ಚಾಲನೆ ನೀಡುವರು.
ಬಳಿಕ ಸೊಸೈಟಿ ಬಳಿಯಿಂದ ವಾಹನ ಜಾಥಾ ಆರಂಭವಾಗಿ ವಿವೇಕಾನಂದ ವಿದ್ಯಾಸಂಸ್ಥೆ ಸಮಾವೇಶ ನಡೆಯುವ ಸ್ಥಳಕ್ಕೆ ಬರಲಿದೆ.ಜಾಥಾಕ್ಕೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚೆನ್ನಕೇಶವ ಜಾಲ್ಸೂರು ಚಾಲನೆ ನೀಡಲಿದ್ದಾರೆ.
ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್ ಸಹಕಾರಿ ಧ್ವಜಾರೋಹಣ ಮಾಡುವರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು
ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯುವುದು. ಸಂಸದ ಕ್ಯಾ.ಬ್ರಿಜೇಶ್ ಚೌಟ ಸಮಾರಂಭವನ್ನು ಉದ್ಘಾಟಿಸುವರು. ಶಾಸಕಿ ಭಾಗೀರಥಿ ಮುರುಳ್ಯ ಕ್ಯಾಲೆಂಡರ್ ಬಿಡುಗಡೆಗೊಳಿಸುವರು. ಕ್ರೀಡೋತ್ಸವದ ಬಹುಮಾನವನ್ನು ಎಂ.ಎಲ್.ಸಿ. ಕಿಶೋರ್ ಕುಮಾರ್ ಬೊಟ್ಯಾಡಿ ವಿತರಣೆ ಮಾಡುವರು.















ಸನ್ಮಾನ : ಸಮಾರಂಭದಲ್ಲಿ ಹಿರಿಯ ಸಹಕಾರಿಗಳಾದ ತೀರ್ಥರಾಮ ಎ.ವಿ., ದಿವಾಕರ ರೈ ಪಿ.ಬಿ., ನಿತ್ಯಾನಂದ ಮುಂಡೋಡಿ, ಮಾಧವ ಗೌಡ ಜಾಕೆ, ವಸಂತ ಜಿ ಗಬ್ಬಲಡ್ಕ, ಜಯರಾಮ ರೈ ಕುರಿಯರನ್ನು ಸನ್ಮಾನಿಸಲಾಗುವುದು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸನ್ಮಾನ ನೆರವೇರಿಸುವರು.
ಶತಮಾನೋತ್ತರ ಸಂಘದ ಮಾಜಿ ಅಧ್ಯಕ್ಷರು ಹಾಗೂ ೨೦೨೪ -೨೫ನೇ ಸಾಲಿನಲ್ಲಿ ನಿವೃತ್ತರಾದ ಸುಳ್ಯ ತಾಲೂಕಿನ ಸಹಕಾರ ಸಂಘಗಳ ನಿವೃತ್ತ ಸಿಬ್ಬಂದಿಗಳಿಗೆ ಗೌರವಾರ್ಪಣೆ ನಡೆಯುವುದು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ ಸನ್ಮಾನ ನೆರವೇರಿಸುವರು. ಹಲವು ಮಂದಿ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಚಾರ ಮಂಡನೆ : ಸಭಾ ಕಾರ್ಯಕ್ರಮದ ಬಳಿಕ `ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ಎಂಬ ವಿಚಾರ ಮಂಡನೆ ನಡೆಯುವುದು. ಡಿಸಿಸಿ ಬ್ಯಾಂಕ್ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ನಾಯರ್ ವಿಚಾರ ಮಂಡಿಸುವರು.










