ಚೊಕ್ಕಾಡಿ ಮಯೂರಿ ಯುವತಿ ಮಂಡಲ ಹಾಗೂ ಸ್ತ್ರೀ ಶಕ್ತಿ ಸಂಘ ಚೊಕ್ಕಾಡಿ ಇದರ ವತಿಯಿಂದ ಚೊಕ್ಕಾಡಿ ಅಂಗನವಾಡಿ ಪುಟಾಣಿ ಮಕ್ಕಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ನಡೆಸಲಾಯಿತು. ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ನೀಡಲಾಯಿತು. ಜೊತೆಗೆ ಸಿಹಿ ತಿಂಡಿ ವಿತರಿಸಲಾಯಿತು.















ಈ ಕಾರ್ಯಕ್ರಮದಲ್ಲಿ ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ ಗೀತಾ ಕೊರತ್ಯಡ್ಕ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಉಪಸ್ಥಿತರಿದ್ದರು.










