
















ನವೆಂಬರ್ 16 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಏಕದಿನ ಶಿಬಿರವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯ ನೆರವೇರಿತು . ಕೊನೆಯಲ್ಲಿ ಸಮಾರೋಪ ಸಮಾರಂಭದೊಂದಿಗೆ ಶಿಬಿರವನ್ನು ಮುಕ್ತಾಯಗೊಳಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಶುಪಾಲರದಂತಹ ಪ್ರಕಾಶ್ ಮೂಡಿತ್ತಾಯ,ಬೋಧಕ ವರ್ಗದವರಾದ ಮಮತಾ, ಪೂರ್ಣಿಮಾ,ಶಿವರಾಮ,ಶಿಬಿರದ ಸಂಚಾಲಕರಾದ ಡಾ. ಮೋನಿಷಾ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಛೇರಿ ಸಹಾಯಕಾರದಂತಹ ಬಾಲಕೃಷ್ಣರವರು ಉಪಸ್ಥಿತರಿದ್ದರು. ಎಲ್ಲರ ಸಹಕಾರದೊಂದಿಗೆ ಶಿಬಿರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು.











