ಸುಬ್ರಹಣ್ಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಸಮಗ್ರ ದ್ವಿತೀಯ ಸ್ಥಾನ

0

ದ. ಕ. ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ಸುಬ್ರಹ್ಮಣ್ಯ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯು, ನ.18 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೆಕಲ್ಲಿನಲ್ಲಿ ನಡೆದಿದ್ದು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಸುಬ್ರಹ್ಮಣ್ಯ ವಿದ್ಯಾ ಸಂಸ್ಥೆಗೆ ಕ್ಲಸ್ಟರ್ ಮಟ್ಟದ ಕಿರಿಯ ಪ್ರಾಥಮಿಕ ವಿಭಾಗ ಮತ್ತು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ.