ಕಾಯರ್ತ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಕಳೆದ ಒಂದು ತಿಂಗಳಿಗಳಿಂದ ನಡೆಯುತ್ತಿದ್ದು ಇಂದು ಸಂಜೆ ಸಮಾರೋಪ ಸಭಾ ಕಾರ್ಯಕ್ರಮ ನಡೆಯಲಿದೆ.















ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಮುರುಳ್ಯ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ಕೆ.ವಿ.ರೇಣುಕಾ ಪ್ರಸಾದ್ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿರುವರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಪಿ.ಸಿ. ಜಯರಾಮ, ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಕೆ.ಕೃಷ್ಣ ಕಾಮತ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ಪಿ.ಕೆ. ಉಮೇಶ್, ನಾರಾಯಣ ಕೇಕಡ್ಕ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಮಾಜಿ ಉಪಾಧ್ಯಕ್ಷ ಎನ್. ಎ ರಾಮಚಂದ್ರ, ಆಲೆಟ್ಟಿ ಗುಂಡ್ಯ ಶ್ರೀ ಮಡಾರಮನೆ ಶ್ರೀ ಉಳ್ಳಾಕುಲು ದೇವಸ್ಥಾನದ ಅಧ್ಯಕ್ಷ ಅಶೋಕ ಪ್ರಭು, ದೇಂಗೋಡಿ ಮಲೆ ದೈವಗಳ ಚಾವಡಿಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಡ್ಪಂಗಾಯ, ಕಾಯರ್ತೋಡಿ ದೇವಸ್ಥಾನದ ಸೇವಾ ಸಮಿತಿ ಸಂಚಾಲಕ ಕಿಶೋರ್ ಕೆ ಗೌರವ ಉಪಸ್ಥಿತರಿರುವರು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.










