ಕರಿಕ್ಕಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಇಲಾಖೆ ಸುಳ್ಯ, ಗ್ರಾಮ ಪಂಚಾಯತ್ ಪಂಜ, ಬಾಲ ವಿಕಾಸ ಸಮಿತಿ ಮತ್ತು ಮಕ್ಕಳು ಹಾಗೂ ಮಕ್ಕಳ ಪೋಷಕರ ವತಿಯಿಂದ ಕರಿಕ್ಕಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಅಂಗನವಾಡಿ ಪುಟಾಣಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು.


ಕುಮಾರಿ ಈಶಾನೀ ಸಭಾಧ್ಯಕ್ಷತೆ ವಹಿಸಿದ್ದರು.
ಶಿಶು ಅಭಿವೃದ್ಧಿ ಇಲಾಖೆಯ ಪಂಜ ವಲಯದ ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ ಕೆ ಇಲಾಖೆಯ ಮಾಹಿತಿ ನೀಡಿದರು.ಐವತ್ತೊಕ್ಲು ಗ್ರಾಮದ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಸತ್ಯವತಿ
ಆರೋಗ್ಯ ಕುರಿತು ಮಾಹಿತಿ ನೀಡಿದರು.


ಕರಿಕ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಚಂದನ್, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪ್ರವೀಣಾ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಂಗನವಾಡಿ ಪುಟಾಣಿಗಳಿಗೆ, ಪೋಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಪೋಷಣ್ ಸಮುದಾಯ ಕಾರ್ಯಕ್ರಮದ ಅಡಿಯಲ್ಲಿ ಸೀಮಂತ ಮತ್ತು ಅನ್ನ ಪ್ರಾಶನ
ಕಾರ್ಯಕ್ರಮ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೀಲಾವತಿ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ಅರ್ಪಿತಾ ವಂದಿಸಿದರು.