ನಾಗತೀರ್ಥ ಶಾಲೆಯಲ್ಲಿ ‘ಪಂಜ ಕ್ಲಸ್ಟರ್ ಮಟ್ಟದ’ ಪ್ರತಿಭಾ ಕಾರಂಜಿ ಉದ್ಘಾಟನೆ

0

⬆️ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳು ಅನಾವರಣ ಗೊಳ್ಳುವ ವೇದಿಕೆ: ಡಾ.ದೇವಿಪ್ರಸಾದ್ ಕಾನತ್ತೂರ್

ಕರ್ನಾಟಕ ಸರಕಾರ,ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ.ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ,ಸಮೂಹ ಸಂಪನ್ಮೂಲ ಕೇಂದ್ರ ಪಂಜ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗತೀರ್ಥ ಇದರ ವತಿಯಿಂದ ಪ್ರಾಥಮಿಕ ಶಾಲಾ ಕಿರಿಯ ಮತ್ತು ಹಿರಿಯ ವಿಭಾಗದ ಪಂಜ ಕ್ಲಸ್ಟರ್ ಮಟ್ಟದ
ಪ್ರತಿಭಾ ಕಾರಂಜಿ-2025-26
ನ.22 ರಂದು ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ “ಪಠ್ಯದ ಜೊತೆಗೆ ಮಕ್ಕಳಲ್ಲಿ ಅನೇಕ ಪ್ರತಿಭೆಗಳು ಅಡಗಿರುತ್ತದೆ. ಅವುಗಳನ್ನು ಅನಾವರಣ ಗೊಳಿಸಿಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. “ಎಂದು ಹೇಳಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ಮಧು ಚಂದ್ರ ಸಭಾಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪ್ರಮೀಳಾ ಸಂಪ, ರಾಜ್ಯ ಸರಕಾರಿ ನೌಕರ ಸಂಘದ ಪದಾಧಿಕಾರಿ ಶ್ರೀಮತಿ ನಳಿನಾಕ್ಷಿ, ತಾಲೂಕು ಸರಕಾರಿ ಪ್ರಾಥಮಿಕ ಶಿಕ್ಷಕರ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಸರೋಜಿನಿ ಕೆಮ್ಮೂರು.


ಹಾಗೂ ನಾಗತೀರ್ಥ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುರಾಜ್ ಕಕ್ಯಾನ, ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕು.ಅಂಕಿತಾ ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ ಸ್ವಾಗತಿಸಿದರು.ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅ.ಶಿಕ್ಷಕಿ ಶ್ರೀಮತಿ ಮಂಜುಳಾ ಅಶೋಕ್ ನಾಗತೀರ್ಥ ನಿರೂಪಿಸಿದರು.ಶಿಕ್ಷಕಿ ಶ್ರೀಮತಿ ವಿದ್ಯಾಶ್ರೀ ವಂದಿಸಿದರು. ಒಟ್ಟು 11ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು.6 ವೇದಿಕೆಯಲ್ಲಿ ಸ್ಪರ್ಧೆಗಳು ನಡೆಯಲಿದೆ.