ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಗೆ ಪಿ.ಬಿ.ಹರೀಶ್ ರೈ ಆಯ್ಕೆ

0

ಕಾಸರಗೋಡಿನ
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ನೀಡಲಾಗುವ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮಂಗಳೂರಿನ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ.
ಪತ್ರಿಕೋದ್ಯಮದಲ್ಲಿ 3 ದಶಕದ ಅನುಭವ ಹೊಂದಿರುವ ಪಿ.ಬಿ.ಹರೀಶ್ ರೈ ಅವರು ಕುಕ್ಕೆ ಸುಬ್ರಹ್ಮಣ್ಯದವರಾಗಿದ್ದು, ವಿಜಯವಾಣಿ ಪತ್ರಿಕೆಯ ಮುಖ್ಯ ವರದಿಗಾರ. ಪ್ರಸ್ತುತ ಮಂಗಳೂರು ಪ್ರೆಸ್ ಕ್ಲಬ್‌ನ ಅಧ್ಯಕ್ಷ ಹಾಗೂ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿದ್ದಾರೆ.