














ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ?ವಿಸ್ತಾರ? ನ. ೨೦ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಕ್ಯಾಪ್‌ಜಮಿನಿ ಕಂಪೆನಿಯ ಡಿಸೈನ್ ವೆರಿಫಿಕೇಶನ್ ಇಂಜಿನಿಯರ್ ಸುಜಯ್ ಭಾಗವಹಿಸಿ ಭವಿಷ್ಯದಲ್ಲಿ ಇಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿನ ಆಗಾಧ ಉದ್ಯೋಗಾವಕಾಶಗಳು ಮತ್ತು ಅದಕ್ಕೆ ಬೇಕಾದ ಪೂರ್ವತಯಾರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ವಹಿಸಿದ್ದರು. ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಕುಸುಮಾಧರ ಎಸ್. ನೂತನ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುಳ್ಯದ ಗೂಗಲ್ ವಿದ್ಯಾರ್ಥಿ ರಾಯಭಾರಿ ಭೂಮಿಕಾಳನ್ನು ಸನ್ಮಾನಿಸಲಾಯಿತು. ಪ್ರೊ. ಲೋಕೇಶ್ ಪಿ.ಸಿ. ಸ್ವಾಗತಿಸಿದರು ಮತ್ತು ವಿಭಾಗ ಸಂಘದ ಕಾರ್ಯದರ್ಶಿ ಆಷ್ಲೇಶ್ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.










