















ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿಜಿಸ್ಟರ್ ಸುಳ್ಯ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಡಿಯಲ್ಲಿ ಕೆವಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಸುಳ್ಯ ಮತ್ತು ಜಿಲ್ಲಾ ಅಂದತ್ವ ನಿಯಂತ್ರಣ ಸೊಸೈಟಿ (ರಿ) ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಇವರ ಜಂಟಿ ನೇತೃತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆ/ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯ ಕಾರ್ಯಕ್ರಮ ನಿಂತಿಕಲ್ಲು ಬಾಳಿದ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾಬೋಧಿನಿ ಎಜ್ಯುಕೇಶನಲ್ ಸೊಸೈಟಿ ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣ ರಾವ್ ಯು.ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಅರೋಗ್ಯ ಹುಡುಕಿಕೊಂಡು ಹೋಗುವ ಪರಿಸ್ಥಿತಿ ಬಂದಿದೆ. ಗ್ರಾಮೀಣ ಜನರಿಗೆ ಅರೋಗ್ಯ ತಪಾಸಣೆಯನ್ನು ಉಚಿತವಾಗಿ ಮಾಡಿಸುವ ಅವಕಾಶವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯು ಕಲ್ಪಿಸಿದೆ. ಇವರ ಈ ಕಾರ್ಯಕ್ರಮ ಶ್ಲಾಘನೀಯ ಈ ವಿದ್ಯಾ ಸಂಸ್ಥೆಗೂ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಗೂ ಅವಿನಾಭವ ಸಂಬಂಧ ಇದೆ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ವಿದ್ಯಾಸಂಸ್ಥೆಯ ಮುಖ್ಯ ಗುರುಗಳಾದ ಉದಯಕುಮಾರ್ ರೈ ಎಸ್. ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ವೈದ್ಯರಾದ ಇಎನ್‌ಟಿ ತಜ್ಞ ಡಾ. ಹರ್ಷ. , ಪಿಆರ್‌ಒ ಮನೆಜರ್ ರಘುಪತಿ ಯು ಎಮ್, ಮುಪ್ಪೇರ್ಯ ಒಕ್ಕೂಟದ ಅಧ್ಯಕ್ಷೆ ಪ್ರೇಮಲತಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕು ವಲಯ ಮೇಲ್ವಿಚಾರಕಿ ಸವಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ಲಕ್ಷೀ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾಮದ ಸೇವಾ ಪ್ರತಿನಿಧಿ ಬೇಬಿಶಾಲಿನಿ ಸ್ವಾಗತಿಸಿದರು. ನಂದಿನಿ ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಶ್ರೀಮತಿ ಕಮಲ ವಂದಿಸಿದರು.












