ಕರ್ನಾಟಕ ಸರಕಾರ, ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಯನಗರ ಇದರ ವತಿಯಿಂದ ಪ್ರಾಥಮಿಕ ಶಾಲಾ ಕಿರಿಯ ಮತ್ತು ಹಿರಿಯ ವಿಭಾಗದ ಸುಳ್ಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-2025-26
ನ.22 ರಂದು ಜಯನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ದೃಷ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮುದ್ದಪ್ಪ ಜಯನಗರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯರಾದ ಕೆ ಆರ್ ಜಿ ಗೋಪಾಲಕೃಷ್ಣ ಭಟ್ ಭಾವನ ಬಳಗ ಸುಳ್ಯ ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಿತ ನುಡಿಗಳ ಸಂದೇಶವನ್ನು ಹಾಡಿದರು.
ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರಾದ ನಾರಾಯಣ, ಸುಳ್ಯ ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ದೇವರಾಜ್, ನಿವೃತ್ತ ದೈಹಿಕ ಶಿಕ್ಷಕ ತೀರ್ಥರಾಮ ಅಡ್ಕಬಳೆ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ, ಶಾಲಾ ಎಸ್ಟಿಎಂಸಿ ಉಪಾಧ್ಯಕ್ಷರಾದ ನಳಿನಿ ಭಟ್, ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯನಿ ನಳಿನಿ ಕೆ ಸ್ವಾಗತಿಸಿ ಪ್ರಾಸ್ತವಿಕ ಮಾತನಾಡಿದರು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭ ಗೊಂಡಿತು. ಸಿ ಆರ್ ಪಿ ಶ್ರೀಮತಿ ಮಮತಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಿಕ್ಷಕಿ ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿದರು.
ಪ್ರತಿಭಾ ಕಾರಂಜಿಯಲ್ಲಿ ಸುಮಾರು ಸುಳ್ಯ ಕ್ಲಸ್ಟರ್ ನ 13 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸಾಂಸ್ಕೃತಿಕ,ಕಲೆ ಸ್ಪರ್ಧಾ ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.
ಶಾಸಕಿ ಕುಮಾರಿ ಭಾಗಿರಥೀ ಮುರುಳ್ಯರವರು ಭಾಗಿ, ವಿವಿಧ ಯೋಜನೆಗಳ ಉದ್ಘಾಟನೆ















ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯರವರು ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅನುದಾನ ಹಾಗೂ ಶಾಸಕರ ಸಹಕಾರದಿಂದ ನಿರ್ಮಾಣಗೊಂಡಂತಹ ವಿದ್ಯಾರ್ಥಿನಿಯರ ಶೌಚಾಲಯ ಕಟ್ಟಡ, ಭೋಜನ ಶಾಲೆಗೆ ನೂತನವಾಗಿ ಅಳವಡಿಸಿದ ಟೈಲ್ಸ್ ಕೊಠಡಿ, ಶಾಲೆಗೆ ದಾನಿಗಳ ಸಹಕಾರದಿಂದ ನಿರ್ಮಿತವಾದ ಸ್ಮಾರ್ಟ್ ಕ್ಲಾಸ್ ತರಗತಿ ಇದರ ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಶಾಸಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಸುಳ್ಯ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್, ನಗರ ಪಂಚಾಯತ್ ಮಾಜಿ ಸದಸ್ಯ ಶಿಲ್ಪಾ ಸುದೇವ್, ವಿನಯ್ ಕುಮಾರ್ ಕಂದಡ್ಕ ಮೊದಲಾದವರು ಉಪಸ್ಥಿತರಿದ್ದರು.
ಪ್ರಶಸ್ತಿ ಪ್ರಧಾನ ಫಲಿತಾಂಶ:
ಸಂಜೆ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಹಿರಿಯ ವಿಭಾಗದಲ್ಲಿ ಉತ್ತಮ ಸಾಧನೆ ತೋರಿದ ರೋಟರಿ ಸ್ಕೂಲ್ ಸುಳ್ಯ ಪ್ರಥಮ, ಸೆಂಟ್ ಜೋಸೆಫ್ ಸುಳ್ಯ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಕಿರಿಯ ವಿಭಾಗದಲ್ಲಿ ರೋಟರಿ ಸ್ಕೂಲ್ ಸುಳ್ಯ ಪ್ರಥಮ, ಸೇಂಟ್ ಜೋಸೆಫ್ ಸುಳ್ಯ ದ್ವಿತೀಯ ಪ್ರಶಸ್ತಿ ಪಡೆದುಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರವನ್ನು ವಿತರಿಸಲಾಯಿತು.
ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕ ವೃಂದದವರು, ಪೋಷಕ ವೃಂದದವರು, ಸ್ಥಳೀಯ ಯುವಕರು ಕಾರ್ಯಕ್ರಮದಲ್ಲಿ ಸಹಕರಿಸಿದರು.










