ನೆಟ್ಟಾರು ಶಾಲೆಯಲ್ಲಿ ಕಲಿಕಾ ಚಟುವಟಿಕೆ ಕಾರ್ಯಕ್ರಮ

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಾರು ಇವರ ಸಹಕಾರದೊಂದಿಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025 ಅಂಗವಾಗಿ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುವುದು ಮತ್ತು ವಿವಿಧ ಕಲಿಕಾ ಚಟುವಟಿಕೆಗಳು ಎಂಬ ವಿಷಯದಲ್ಲಿ ಮಾಹಿತಿ ಕಾರ್ಯಕ್ರಮ ನ. 23ರಂದು ನಡೆಯಿತು.
















ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಮಾಯಿಲಪ್ಪ ಜಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಸಂತ ಗೌಡ ನೆಟ್ಟಾರು, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಅಶ್ವಿನಿ ಸ್ವಾಗತಿಸಿ, ಶಿಕ್ಷಕಿ ಮಾಳವಿಕ ವಿ ವಂದಿಸಿದರು. ಶಿಕ್ಷಕಿ ಭವ್ಯ ಎಸ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಜನನಿ, ಭವ್ಯ, ಧನ್ವಿ, ಸಂಧ್ಯಾ ಪ್ರಾರ್ಥಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶಶಿಕಲಾ ಸಹಕರಿಸಿದರು.










