ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2019-24ನೇ ಬ್ಯಾಚಿನ ಪದವಿ ಹಾಗೂ 2021-24ನೇ ಬ್ಯಾಚಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ನ. 22ರಂದು ಕಾಲೇಜಿನ ಧನ್ವಂತರಿ ಆಡಿಟೋರಿಯಂನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ವಹಿಸಿ ಶುಭ ಹಾರೈಸಿದರು. ಉಜಿರೆ ಎಸ್.ಡಿ.ಎಂ. ಕಾಲೇಜಿನ ನಿರ್ದೇಶಕರಾದ ಡಾ. ಪ್ರಸನ್ನ ನರಸಿಂಹ ರಾವ್ ಅತಿಥಿಯಾಗಿ ಭಾಗವಹಿಸಿ ಪದವಿ ಪ್ರದಾನ ಮಾಡಿದರು. ಮುಖ್ಯ ಅತಿಥಿ ಗಳಾಗಿ ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಜಗದೀಶ್ ಕೋನಾರೆಡ್ಡಿ, ಎಒಎಲ್ಇ ಕಾರ್ಯದರ್ಶಿ ಡಾ. ಐಶ್ವರ್ಯ ಕೆ.ಸಿ, ಹಾಸನ ಎಸ್.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಾಜ ರಾವ್
ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಎಒಎಲ್ಇ
ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಎಒಎಲ್ಇ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಕಾಲೇಜಿನ ವಿವಿಧ ವಿಭಾಗಗಳ ವಿಭಾಗ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
















ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು
ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ ಸ್ವಾಗತಿಸಿ, ಡಾ. ಕವಿತಾ ಬಿ.ಎಂ. ವಂದಿಸಿದರು.

ಡಾ. ಲಕ್ಷ್ಮಿ ಸುರೇಶ್ ಮತ್ತು ಡಾ. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು. ಡಾ. ಸ್ಮಿತಾ ತಂಬನ್ ಪ್ರಾರ್ಥಿಸಿದರು.










