
ಕೂತ್ಕುಂಜ ಗ್ರಾಮದ
ಅಡ್ಡತ್ತೋಡು- ಚಿದ್ಗಲ್ ರಸ್ತೆ ಕಾಂಕ್ರೀಟ್ ರಸ್ತೆ ಮತ್ತು ತಡೆಗೋಡೆ ಉದ್ಘಾಟನಾ ಕಾರ್ಯಕ್ರಮ ಅಡ್ಡ ತೋಡು ಅಂಚೆ ಕಚೇರಿ ಬಳಿ ನ.23 ರಂದು ನಡೆಯಿತು.
ಕಾರ್ಯಕ್ರಮವನ್ನು ಪಂಜದ ವೈದ್ಯರಾದ ಡಾ. ರಾಮಯ್ಯ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು
ಕಾಂಕ್ರೀಟ್ ರಸ್ತೆಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ತೆಂಗಿನ ಕಾಯಿ ಒಡೆಯುವುದರ ಮೂಲಕ ಉದ್ಘಾಟಿಸಿದರು .
















ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ವಹಿಸಿದ್ದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು ಸ್ವಾಗತಿಸಿದರು.
ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ನೇತ್ರಾವತಿ ಕಲ್ಲಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು ಜಯರಾಮ ಕಲ್ಲಾಜೆ ವಂದಿಸಿದರು. ಚಂದ್ರಶೇಖರ್ ಇಟ್ಯಡ್ಕ ನಿರೂಪಿಸಿದರು . ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ,
ಶ್ರೀಮತಿ ದಿವ್ಯ ಪುಂಡಿಮನೆ , ಶರತ್ ಕುದ್ವ , ರಸ್ತೆಯ ಫಲಾನುಭವಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.











