ಪೈಚಾರು :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

0

ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯದ ಪೈಚಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬೊಳುಬೈಲು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಚಾಲಕ ಸೇರಿದಂತೆ ಓರ್ವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿ ಅಪಾಯದಿಂದ ಪಾರಾದ ಘಟನೆ ನ ೨೪ ರಂದು ವರದಿಯಾಗಿದೆ.

ಪುತ್ತೂರು ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಕಾರು ಬೊಳುಬೈಲು ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ಮಡಪ್ಪಾಡಿಯ ಓರ್ವರು ಹಾಗೂ ಇನ್ನೋರ್ವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.