ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ನ. 26ರಂದು ಬ್ರಹ್ಮಶ್ರೀ ಕುಂಟಾರು ಶ್ರೀ ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ.















ಬೆಳಿಗ್ಗೆ ಶ್ರೀ ಗಣಪತಿ ಹೋಮ, ನವಕ ಪೂಜೆ, ಪಂಚಾಮೃತಾಭಿಷೇಕ, ನವಕಾಭಿಷೇಕ, ತುಲಾಭಾರ ನಡೆಯಲಿದೆ. ಮಧ್ಯಾಹ್ನ ಶ್ರೀದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೀಪಾರಾಧನೆ, ಮಂಗಳಾರತಿ, ಶ್ರೀ ರಕ್ತೇಶ್ವರಿ ತಂಬಿಲ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










