ದಕ್ಷಿಣ ಕನ್ನಡ ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಸಾವಿತ್ರಿ ‌ಕಣೆಮರಡ್ಕ ಆಯ್ಕೆ

0

ದಕ್ಷಿಣ ಕನ್ನಡ ಜಿಲ್ಲಾ ಗ್ರಂಥಾಲಯ ನೌಕರರ‌ ಸಂಘದ. ಜಿಲ್ಲಾಧ್ಯಕ್ಷರಾಗಿ ಮಂಡೆಕೋಲು ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ನಡೆದ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಶ್ರೀಮತಿ ಸಾವಿತ್ರಿ ಕಣೆಮರಡ್ಕ ರವರು ಮಂಡೆಕೋಲು ಗ್ರಂಥಾಲಯವನ್ನು ಮಾದರಿ‌ ಗ್ರಂಥಾಲಯ ಮಾಡಿ ರಾಜ್ಯ‌ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕರಾಗಿ, ಯಾದವ ಸಂಘದ ಯುವ ಘಟಕದ ಅಧ್ಯಕ್ಷರಾಗಿಯೂ ಸಾವಿತ್ರಿ ಯವರು ಜವಾಬ್ದಾರಿ ‌ನಿರ್ವಹಿಸುತ್ತಿದ್ದಾರೆ.