ಬ್ರಹ್ಮಗಿರಿ ಸಹೋದಯ ಕೊಡಗು ಇದರ ಸಹಯೋಗದೊಂದಿಗೆ ಎ.ಎಲ್.ಜಿ ಕ್ರೆಸೆಂಟ್ ಶಾಲೆ ಮಡಿಕೇರಿ ಇವರು ಆಯೋಜಿಸಿದ ಕನ್ನಡ ಕಲರವ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಕೆ.ವಿ.ಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಸ್ಪರ್ಧೆಯಲ್ಲಿ ಸೋನಾ ನಾರ್ಕೋಡು 10 ನೇ ತರಗತಿ, ಮನ್ವಿತಾ ಸಿ.ಆರ್ ಹತ್ತನೇ ತರಗತಿ, ಮಾನ್ವಿ ಎ .ವೈ 9ನೇ ತರಗತಿ, ಶರ್ವ. ಕೆ 8ನೇ ತರಗತಿ ಇವರು ಭಾಗವಹಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಕನ್ನಡ ಶಿಕ್ಷಕ ವೃಂದದವರು ಮಾರ್ಗದರ್ಶನ ನೀಡಿದ್ದರು.















ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಅಭಿನಂದಿಸಿ, ಶುಭ ಹಾರೈಸಿದರು. ಪ್ರಾಂಶುಪಾಲ ಅರುಣ್ ಕುಮಾರ್ ವಿದ್ಯಾರ್ಥಿಗಳ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿ, ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ , ಶಿಕ್ಷಕರು, ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










