ಪಡ್ಪಿನಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ ಆರ್ ಪಿ ಎಲ್ ವತಿಯಿಂದ ನಿರ್ಮಿಸಿರುವ ನೂತನ ಶೌಚಾಲಯ ಮತ್ತು ದ್ವಿ ಭಾಷ ಆಂಗ್ಲಮಾಧ್ಯಮ ತರಗತಿಯ ಉದ್ಘಾಟನಾ ಕಾರ್ಯಕ್ರಮ ನ.25 ರಂದು ನಡೆಯಿತು. ನೂತನ ಶೌಚಾಲಯವನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ರಿಬ್ಬನ್ ಎಳೆದು ಉದ್ಘಾಟಿಸಿದರು.
ದ್ವಿ ಭಾಷಾ ಆಂಗ್ಲ ಮಾಧ್ಯಮ ತರಗತಿಯನ್ನು ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ದೀಪ ಬೆಳಗಿಸಿ ಉದ್ಘಾಟಸಿದರು. 1ನೇ ತರಗತಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಬರಮಾಡಿ ಕೊಳ್ಳಲಾಯಿತು.
















ಎಲ್ ಕೆ ಜಿ, ಯು ಕೆ ಜಿ ಅನುಷ್ಠಾನ ಸಮಿತಿ ಅಧ್ಯಕ್ಷ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಗಫೂರ್,
ಕಾರ್ಯಕ್ರಮದಲ್ಲಿ ಸ್ಥಳದಾನಿ ವಾಸುದೇವ ನಡ್ಕ , ಎಲ್ ಕೆ ಜಿ, ಯು ಕೆ ಜಿ ಅನುಷ್ಠಾನ ಸಮಿತಿ ಕಾರ್ಯದರ್ಶಿ ಲೋಕೇಶ್ ಆಕ್ರಿಕಟ್ಟೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಂತ್ಯಾಸ್ , ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ರುಕ್ಮಿಣಿ ಬಿ ಸಿ , ಎಸ್ ಡಿ ಎಂ ಸಿ ಅಧ್ಯಕ್ಷ ಮಹಮ್ಮದ್ ರಫೀಕ್ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಸರೋಜಿನಿ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಧರ್ಮಾವತಿ ಟಿ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಸರೋಜಿನಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿ ಕು.ಲಾವಣ್ಯ ಬಿ ಎಂ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಸುಗಂಧಿ ಯು ವಂದಿಸಿದರು.










