ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಂಡೆಕೋಲಿನಲ್ಲಿ ವಿಶೇಷ ಪೂಜೆ

0

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ
ನ. 25ರಂದು ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ರಾಮಚಂದ್ರ ಮಾಸ್ಟರ್, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಅನಿಲ್ ತೋಟಪಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಗೀತಾ ಮೈಲೇಟಿ ಪಾರೆ, ವಲಯದ ಮೇಲ್ವಿಚಾರಕರಾದ ಅನಿತಾ ,VLE ಸುಮಿತ, ಸ್ಥಳೀಯ ಸೇವಾಪ್ರತಿನಿಧಿ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.