ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಚಂಪಾಷಷ್ಠಿ

0

ಬ್ರಹ್ಮರಥದಲ್ಲಿ ರಥಾರೂಡರಾದ ಸುಬ್ರಹ್ಮಣ್ಯ ದೇವರ ರಥೋತ್ಸವ

ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಮುಖಂಡರು ಭಾಗಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಠಿ ಜಾತ್ರೋತ್ಸವದ ಬ್ರಹ್ಮರಥೋತ್ಸವ ಇಂದು ಬೆಲೆ ವೈಭವದಿಂದ, ಸಡಗರದಿಂದ, ಗಣ್ಯರ ಉಪಸ್ಥಿತಿಯಲ್ಲಿ ಜರಗಿತು.

ಪಂಚಮಿ ರಥವನ್ನು ಮೊದಲಾಗಿ ಎಳೆಯಲಾಗಿ, ಬಳಿಕ ಬ್ರಹ್ಮರಥೋತ್ಸವ ನಡೆಯಿತು. ದೇವಳದ ಆನೆ ಯಶಸ್ವಿ ರಥ ಎಳೆಯಲು ಸಾಥ್ ನೀಡಿತು, ಅದ್ದೂರಿಯ ರಥೋತ್ಸವಕ್ಕೆ ಬ್ಯಾಂಡ್, ವಾಳಗ, ಚೆಂಡೆಗಳಿದ್ದವು.


ಕರ್ನಾಟಕ ರಾಜ್ಯದ ಮುಜುರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಅರಣ್ಯ ಸಚಿವ ರಮಾನಾಥ ರೈ, ಶಾಸಕಿ ಭಾಗೀರಥಿ ಮುರುಳ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮೋಹನ ರಾಮ್ ಸುಳ್ಳಿ, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, .ಜಿಲ್ಲಾಧಿಕಾರಿ ದರ್ಶನ್, ಜಿಲ್ಲಾ ಎಸ್ಪಿ ಡಾ.ಅರುಣ್,
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಡಾ. ರಘು, ಅಜಿತ್ ಪಾಲೇರಿ, ಮಹೇಶ್ ಕುಮಾರ್ ಕರಿಕ್ಕಳ, ಶ್ರೀಮತಿ ಲೀಲಾ ಮನಮೋಹನ್, ಶ್ರೀಮತಿ ಪ್ರವೀಣ ರೈ ಮರುವಂಜ, ಶ್ರೀಮತಿ ಸೌಮ್ಯ, ಆದಿಕಾರಿಗಳು, ದೇವಾಲಯದ ಸಿಬ್ಬಂದಿಗಳು, ಸಾವಿರಾರು ಭಕ್ತರು ಪಾಲ್ಗೊಂಡರು.