
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಕೊಡಗು ಸಂಪಾಜೆ ವಲಯ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಮೊಣ್ಣಂಗೇರಿ ಕಾರ್ಯಕ್ಷೇತ್ರ ಇವರ ವತಿಯಿಂದ ನ. 25 ರಂದು ಪರಮಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಕಾವೇರಿ ಮಕ್ಕಳ ಗೃಹ ದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು.















ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ಪುರುಷೋತ್ತಮ ಉಪಸ್ಥಿತರಿದ್ದು ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆದು ಕೊಳ್ಳುವ ಬಗ್ಗೆ ತಿಳಿಸಿ ಶುಭ ಹಾರೈಸಿದರು, ಹಾಗೂ ಮೇಲ್ವಿಚಾರಕರಾದ ಸಂತೋಷ್, ಜ್ಞಾನವಿಕಾಸ ಅಧಿಕಾರಿಗಳಾದ ಮಾಲಿನಿ,ಶೌರ್ಯ ತಂಡದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು,ನೋಟ್ ಬುಕ್ ವಿತರಿಸಿ ಮಕ್ಕಳಿಗೆ ಸಿಹಿ ಹಂಚಿದರು. ಸ್ಥಳೀಯ ಸೇವಾ ಪ್ರತಿನಿಧಿಯವರು ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಸಲ್ಲಿಸಿದರು.










