ಬೀದಿ ನಾಯಿಗಳ‌ ನಿಯಂತ್ರಣಕ್ಕೆ ಕ್ರಮ

0

ಶಿಕ್ಷಣ ಸಂಸ್ಥೆಗಳು ಸಹಿತ ಸಾರ್ವಜನಿಕರಿಗೆ ನಗರ ಪಂಚಾಯತ್ ಸೂಚನೆ


ಬೀದಿ ನಾಯಿಗಳ ನಿಯಂತ್ರಣದ ನಿಟ್ಟಿನಲ್ಲಿ ನಗರ ಪಂಚಾಯತ್ ಶಿಕ್ಷಣ ಸಂಸ್ಥೆಗಳಿಗೆ, ಕಟ್ಟಡ ಮಾಲೀಕರಿಗೆ, ಸಾರ್ವಜನಿಕರಿಗೆ ಸೂಚನೆಗಳನ್ನು ಹೊರಡಿಸಿದೆ.

ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿಸಂಖ್ಯೆ ೫/೨೦೨೫ ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪಟ್ಟಣ ಪಂಚಾಯತ್ ಸುಳ್ಯ ಇವರಿಗೆ ತಿಳಿಸುವುದು.


೧. ತಮ್ಮಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮವಹಿಸುವುದು.


೨. ಸುಳ್ಯ ಪಟ್ಟಣ ಪಂಚಾಯತ್ ನಿಂದ ಮುಂದಿನ ದಿನಗಳಲ್ಲಿ ಬೀದಿನಾಯಿಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸಹಕರಿಸಲು ಹಾಗು ಅವುಗಳ ಪ್ರವೇಶ ನಿರ್ಬಂಧಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕಮಾಡಿ ಈ ಬಗ್ಗೆ ಪಟ್ಟಣ ಪಂಚಾಯತ್ ಸುಳ್ಯ ಕಾರ್ಯಾಲಯಕ್ಕೆ ಮಾಹಿತಿಯೊಂದಿಗೆ ವರದಿ ನೀಡುವುದು.


೩. ಬೀದಿನಾಯಿಗಳು ಆವರಣದೊಳಗೆ ಪ್ರವೇಶಿಸುವುದನ್ನು ನಿಯಂತ್ರಿಸಲು ತಮ್ಮ ಸಂಸ್ಥೆಯ ಆವರಣದಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯಗಳ ಸಂಗ್ರಹಣೆ, ದಾಸ್ತಾನು ಮತ್ತು ವಿಲೇವಾರಿ ಮಾಡಲು ಕಡ್ಡಾಯವಾಗಿ ಸೂಕ್ತಕ್ರಮವಹಿಸುವುದು.


೪. ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು.


೫. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮವಹಿಸಲಾಗುವುದು ಎಂದು‌ನಗರ ಪಂಚಾಯತ್ ಮುಖ್ಯಾಧಿಕಾರಿ ತಿಳಿಸಿದ್ದಾರೆ