ಸುಳ್ಯದ ಗಾಂಧಿನಗರದಲ್ಲಿ ನಡೆದ ಘಟನೆ
















ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಕಾರಿನ ಮುಂಭಾಗ ಜಖಂಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ಸಂಭವಿಸಿದೆ.

ಮಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟೂರಿಸ್ಟ್ ಕಾರು ಸುಳ್ಯದ ಗಾಂಧಿನಗರ ಬಳಿ ಮುಂದಿನಿಂದ ಹೋಗುತ್ತಿದ್ದ ಲಾರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆಂದು ತಿಳಿದು ಬಂದಿದೆ.












