ಸುಳ್ಯದಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆ

0

ದೇಶದ ಸಂವಿಧಾನದ ಮಹತ್ವವನ್ನು ಸಾರುವ ಉದ್ದೇಶಕ್ಕಾಗಿ ನಡೆಯುವ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಬುಧವಾರ ಸುಳ್ಯ ತಾ.ಪಂ.ಸಭಾಂಗಣದಲ್ಲಿ ನಡೆಯಿತು.ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ಆಡಳಿತದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಉದ್ಘಾಟಿಸಿ ಮಾತನಾಡಿ ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಆರ್ಥಿಕ, ಸಾಮಾಜಿಕ, ಧಾಮಿಕ ಸ್ವಾತಂತ್ರ್ಯ ನೀಡಿದೆ. ಸಂವಿಧಾನದಲ್ಲಿ ನೀಡಿದ ನಿರ್ದೇಶನಗಳು, ಮಾರ್ಗದರ್ಶನಗಳು ಇಂದಿನ ಯುವಜನತೆ ಅಳವಡಿಸಿಕೊಳ್ಳಬೇಕು ಮತ್ತು ಅನುಸರಿಸಬೇಕು ಎಂದು ಹೇಳಿದರು.

ಸಂವಿಧಾನದ ಬಗ್ಗೆ ಕೆವಿಜಿ ಕಾನೂನು ಕಾಲೇಜಿನ ಪ್ರಾಧ್ಯಾಪಕಿ ಸುಚಿತ್ರ ಜನಾರ್ಧನ ಉಪನ್ಯಾಸ ನೀಡಿದರು.ವೇದಿಕೆಯಲ್ಲಿ ಸುಳ್ಯ ತಹಶೀಲ್ದಾರ್ ಮಂಜುಳ. ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣ. ಬಿ. ಉಪಸ್ಥಿತರಿದ್ದರು. ಪ್ರಮುಖರಾದ ಗೋಪಾಲ ಪೆರಾಜೆ,ಆನಂದ ಬೆಳ್ಳಾರೆ, ಅಚ್ಚುತ್ತ ಮೆಲ್ಕಜೆ, ಕರುಣಾಕರ ಪಲ್ಲತಡ್ಕ,ಸುಳ್ಯ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ವಿವಿಧ ಶಾಲಾ ಕಾಲೇಜಿನ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದರು.ಸಂವಿಧಾನ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಜಾಥಾ, ಸಂವಿಧಾನ ಜಾಗೃತಿ ನೃತ್ಯ ನಡೆಯಿತು. ಅಲ್ಲದೇ ಸಂವಿಧಾನ ದಿನಾಚರಣೆಯ ಅಂಗವಾಗಿ ನಡೆದ ಚಿತ್ರಕಲೆ ಸ್ಪರ್ಧೆ, ಫೋಟೋಗ್ರಫಿ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣ. ಬಿ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ. ವಂದಿಸಿದರು. ಶಿಕ್ಷಕಿ ಮಮತಾ ಕರ‍್ಯಕ್ರಮ ನಿರೂಪಿಸಿದರು.

.