ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯ ಸಪ್ತಾಹ ಉದ್ಘಾಟನೆ

0

ಐವರ್ನಾಡು ಗ್ರಾಮ ಪಂಚಾಯತ್ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ನ. 17 ರಂದು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.


ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಬಾಲಕೃಷ್ಣ ಕೀಲಾಡಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ರವರು ಗ್ರಂಥಾಲಯದ ಮಹತ್ವದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಿದರು.
ಗ್ರಂಥಾಲಯ ಮೇಲ್ವಿಚಾರಕರು ಗ್ರಂಥಾಲಯದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಪುಸ್ತಕ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯರಾದ ದೇವಿಪ್ರಸಾದ್ ಕೊಪ್ಪ ತಡ್ಕ ಮತ್ತು ನಾಳಿನಿ ಕೊಡ್ತೀಲು ಸತೀಶ ಜಬಳೆ,
ಸುಂದರಲಿಂಗಂ ಸಿ ಕೂಪು, ಮಮತಾ ಉದ್ದಂಪಾಡಿ ಹಾಗೂ ನರೇಗಾ ಯೋಜನೆಯ ಸಂಯೋಜಕರಾದ ನಮಿತಾರವರು ಹಾಗೂ ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿಗಳು ಸ್ವಾಗತಿಸಿದರು.