ಶ್ರೀ ಶಾರದಾ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿಪೂರ್ವ ಕಾಲೇಜು, ಸುಳ್ಯ ದಲ್ಲಿ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕ್ರೀಡೋತ್ಸವವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ತುಕಾರಾಮ್ ಏನೆಕಲ್ ರವರು ಉದ್ಘಾಟಿಸಿದರು.
















ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಕ್ರೀಡೆಯಲ್ಲಿ ಪ್ರತಿಯೊಬ್ಬರು ಭಾಗವ ಹಿಸಬೇಕೆಂದು ಕರೆ ನೀಡಿದರು. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿಯ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಪಾರೆಪ್ಪಾಡಿ ರವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಭಾಗೀರಥಿರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಕಾರ್ಯದರ್ಶಿಯವರಾದ ಡಾ. ಶ್ರೀಮತಿ ರೇವತಿ ನಂದನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪ್ರಭಾವತಿ ಎಸ್ ರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ ರವರು ಸ್ವಾಗತಿಸಿ, ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ ರವರು ಧನ್ಯವಾದ ಸಮರ್ಪಿಸಿದರು.










