















ಜೀರ್ಣೋದ್ಧಾರಗೊಳ್ಳುತ್ತಿರುವ ಆಲಡ್ಕ ಶ್ರೀ ಮಹಾಮ್ಮಾಯಿ ದೈವಸ್ಥಾನದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಯಿತು.
ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಇದರ ಅಧ್ಯಕ್ಷ ಟಿ. ಎಂ ಶಾಹೀದ್ ತೆಕ್ಕಿಲ್ ಅವರು ಇಂದು ಲೋಕಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಅವರ ಸರಕಾರಿ ನಿವಾಸದಲ್ಲಿ ಭೇಟಿ ಮಾಡಿ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಡ್ಕದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಮಹಾಮ್ಮಾಯಿ ದೈವಸ್ಥಾನ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿಯನ್ನು ಸಲ್ಲಿಸಿದರು.



