ಸೋಣಂಗೇರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಕೊಡುಗೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಸೋನಂಗೇರಿ ಇವರಿಂದ ಸೋಣoಗೇರಿ ಪ್ರಾಥಮಿಕ ಶಾಲೆ ಯಲ್ಲಿ ಶ್ರೀ ಡಾ. ಡಿ ವೀರೇಂದ್ರ ಹೆಗಡೆ ಇವರ 78ನೇ ಜನ್ಮದಿನವನ್ನು ವಿದ್ಯಾರ್ಥಿಗಳಿಗೆ ಶಬ್ದಕೋಶ ಹಾಗೂ ಡ್ರಾಯಿಂಗ್ ಪುಸ್ತಕ ವಿತರಿಸುವ ಮೂಲಕ ನ.25 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಚಿದಾನಂದ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ 10ನೇ ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ತರಗತಿಗಳು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು. ಗಿರಿಧರ್ ನಾಯರ್ ಹಿತ್ಲು ವೇದಿಕೆಯಲ್ಲಿರುವ ಗಣ್ಯರ ಮೂಲಕ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿದ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ನೀಡುತ್ತಿರುವ ಸವಲತು ಗಳನ್ನು ಪಡೆದುಕೊಂಡು ಉನ್ನತ ಶಿಕ್ಷಣ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಈಶ್ವರ ನಾಯ್ಕ ಸೇವಾ ಪ್ರತಿನಿಧಿ ಸೌಮ್ಯ ಶಾಲಾ ಮುಖ್ಯ ಗುರುಗಳಾದ ಕುಸುಮಾವತಿ ಪೋಷಕರದ ಪುರುಷೋತ್ತಮ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಕುಸುಮವತಿ ಸ್ವಾಗತಿಸಿ ಸಹ ಶಿಕ್ಷಕಿ ಸವಿತಾ ವಂದಿಸಿದರು.