ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂವಿಧಾನ ದಿನಾಚರಣೆ

0

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ನ. 26 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಸಂಸದೀಯ ವ್ಯವಹಾರಗಳ ಸಚಿವಾಲಯ ಹಾಗೂ ಕ್ಯಾಬಿನೆಟ್ ಸಚಿವಾಲಯದ ಸೂಚನೆಯ ಅನುಸಾರ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದೊಂದಿಗೆ ಭಾರತೀಯ ಸಂವಿಧಾನ ಪ್ರತಿಜ್ಞೆಯನ್ನು ಬೋಧಿಸಲಾಯಿತು.

18ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿಯನ್ನು ಎನ್ ಎಸ್ ಎಸ್ ವಿದ್ಯಾರ್ಥಿಯಾದ ಕು. ಅನುಪ್ರಿಯ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಎನ್ ಎಸ್ ಎಸ್ ಯೋಜನಾಧಿಕಾರಿ ಡಾ. ಪ್ರಮೋದ ಪಿ ಎ ಹಾಗೂ ಎನ್ ಎಸ್ ಎಸ್ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕು. ಹರ್ಷಿತಾ ಎಂ ಸ್ವಾಗತಿಸಿ, ಕು. ವೈಶಾಲಿ ಪಿ ಜೆ ಮತ್ತು ತಂಡ ಪ್ರಾರ್ಥಿಸಿ, ಕು. ರಾಧಾ ಪವರ್ ವಂದಿಸಿ, ಕು. ಬೃಂದಾ ನಿರೂಪಿಸಿದರು.