ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಐವರ್ನಾಡು ಇದರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ವು ನ. 22ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಇಲ್ಲಿಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಾವತಿಯವರು ಮಕ್ಕಳು ಕಲಿಕೆಯಲ್ಲಿ ಹಾಗೂ ಇತರ ಚಟುವಟಿಕೆಯಲ್ಲಿ ಯಶಸ್ಸು ಸಾಧಿಸಲು ಪುಸ್ತಕದ ಜ್ಞಾನ ಅತಿ ಅವಶ್ಯಕದ ಜ್ಞಾನವನ್ನು ಪಡೆಯಬೇಕಾದರೆ ನಾವು ಗ್ರಂಥಾಲಯಗಳ ಸದುಪಯೋಗ ವನ್ನು ಪಡೆದುಕೊಳ್ಳಬೇಕು ಎಂದರು.









ಮುಖ್ಯ ಅತಿಥಿಯಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷ,ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಿಕ್ಷಕರಾದ ಅರವಿಂದ, ಶಿಕ್ಷಕಿಯಾದ ಗುಣಶ್ರೀ, ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ವೀರಪ್ಪಗೌಡ ಮೊಟ್ಟೆ ಮನೆ ನಂತರ ಚಿತ್ರಕಲೆ ಮತ್ತು ಗ್ರಂಥಾಲಯದ ಮಹತ್ವದ ಬಗ್ಗೆ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿದ ಬಗ್ಗೆ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು ಈ ಬಹುಮಾನ ವನ್ನು ಗ್ರಾಮ ಪಂಚಾಯತ್ ವತಿಯಿಂದ ನೀಡಲಾಯಿತು.

ಸುಮಾರು 45 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಸಮಾಧಾನಕರ ಬಹುಮಾನವನ್ನು ವಿತರಿಸಲಾಯಿತು ವೇದಿಕೆಯಲ್ಲಿ ಉಪಸ್ಥಿತರಿದ್ದವರಿಗೆಲ್ಲ ಪುಸ್ತಕವನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಲಾಯಿತು ಕಾರ್ಯಕ್ರಮದಲ್ಲಿ ಸುಮಾರು 110 ಮಕ್ಕಳು ಭಾಗವಹಿಸಿದ್ದರು ಹಾಗೂ ಶಾಲೆಯ ಶಿಕ್ಷಕರಾದ ಶ್ರೀಮತಿಸರಿತಾ ಮತ್ತು ಶ್ರೀಮತಿ ಹೇಮಲತಾ ಉಪಸ್ಥಿತರಿದ್ದರು.
ಅಡುಗೆ ಸಿಬ್ಬಂದಿಗಳು ಸಹಕರಿಸಿದರು. ಮಕ್ಕಳಿಗೆ ಸಿಹಿತಿಂಡಿಯನ್ನು ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಲೀಲಾವತಿಯವರು ನೀಡಿದರು. ವಿದ್ಯಾರ್ಥಿಗಳಾದ ಪ್ರಾಪ್ತಿ, ಶ್ರಾವಣಿ ,ಪ್ರತಾ ರವರು ಪ್ರಾರ್ಥಿಸಿ, ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಲೀಲಾವತಿಯವರು ಸ್ವಾಗತಿಸಿ ನಿರೂಪಿಸಿ,ವಂದಿಸಿದರು.










