








ನ.29 ಶನಿವಾರ ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ. ಬೆಳ್ಳಾರೆ 1, ಬೆಳ್ಳಾರೆ 2, ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಸುಳ್ಯ ಮಸ್ಕಾಂ ಅಧಿಕಾರಿಗಳು ವಿನಂತಿಸಿದ್ದಾರೆ.










