
ಪಂಜ ವಲಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಪಂಜ ವಿ.ಕೆ.ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿನ ಅಭೂತಪೂರ್ವ ಸಾಧನೆಗಾಗಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ವಿಜಯಕುಮಾರ್ ಸೊರಕೆ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಪಕ್ಷದ ಪಂಜ ವಲಯ ಸಮಿತಿಯ ಅಧ್ಯಕ್ಷ ಕುಸುಮಾಧರ ಕೆರೆಯಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪಂಜದ ಹಿರಿಯ ಕಾಂಗ್ರೆಸ್ ನಾಯಕ ಶ್ರೇಯಂಸ್ ಕುಮಾರ್ ಶೆಟ್ಟಿಮೂಲೆ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿದರು.









ವೇದಿಕೆಯಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ವಲಯ ಸಮಿತಿಯ ಕಾರ್ಯದರ್ಶಿ ಲೋಕನಾಥ್ ಕುದ್ವ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಚಿನ್ನಪ್ಪ ಸಂಕಡ್ಕ ನಿರೂಪಿಸಿ, ರಫೀಕ್ ಐವತ್ತೊಕ್ಲು ಸ್ವಾಗತಿಸಿದರು ಮತ್ತು ವಂದಿಸಿದರು.










