ಸುಮಾರು 33 ವರ್ಷಗಳಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನ. 29ರಂದು ನಿವೃತ್ತಿ ಹೊಂದಲಿರುವ ಪ್ರೊ. ಸಂಜೀವ ಕುದ್ಪಾಜೆಯವರಿಗೆ ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.















ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ನಿವೃತ್ತರಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ, ಹಾರಾರ್ಪಣೆ ಮಾಡಿ ಸನ್ಮಾನಿಸಿದರು. ಎಒಎಲ್ಇ ಕಾರ್ಯದರ್ಶಿ ಹೇಮನಾಥ್ ಕೆ.ವಿ, ನಿರ್ದೇಶಕಿ ಶ್ರೀಮತಿ ಮೀನಾಕ್ಷಿ ಹೇಮನಾಥ್, ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೆರಾಲ್, ವಿದ್ಯಾರ್ಥಿ ಕ್ಷೇಮಾಧಿಕಾರಿ ಹಾಗೂ ಐಕ್ಯೂಎಸಿ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಸೇರಿದಂತೆ ಕಾಲೇಜಿನ ಉಪನ್ಯಾಸ ವೃಂದ, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.










