ಪಂಜ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಕೆ.ಎಸ್ ಗೌಡ ಸಮೂಹ ವಿದ್ಯಾಸಂಸ್ಥೆಗಳ ವಠಾರದಲ್ಲಿ ಇಂದು ಸಂಪನ್ನಗೊಂಡಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ – ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ – ಸುಳ್ಯ ಹಾಗೂ ಕೆ ಎಸ್ ಗೌಡ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ, ವರ್ಷನಗರ, ನಿಂತಿಕಲ್ಲು ಇದರ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮವನ್ನು ಕಲ್ಮಡ್ಕ ಗ್ರಾ.ಪಂ. ಸದಸ್ಯೆ ಶ್ರೀಮತಿ ಹಾಜಿರಾ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜು ವಿಭಾಗದ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಕಾರ್ಯಕ್ರಮದ ಯಶಸ್ಸಿಗೆ ಸಹಭಾಗಿತ್ವ ಎಂಬುದು ಮಹತ್ವದ ಪಾತ್ರ ವಹಿಸುತ್ತದೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ – ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ – ಸುಳ್ಯ ಹಾಗೂ ನಮ್ಮ ಸಮೂಹ ವಿದ್ಯಾಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಪ್ರೌಢಶಾಲಾ ವಿಭಾಗದ ಈ ಕಾರ್ಯಕ್ರಮದಲ್ಲಿ ಪ್ರತಿಭೆ ಗೆಲ್ಲಲಿ ಮತ್ತದು ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಬೆಳಗುತ್ತಿರಲಿ ಎಂಬ ಸದಾಶಯದೊಂದಿಗೆ ಕಾರ್ಯಕ್ರಮ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೆ.ಎಸ್ ಗೌಡ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಅಶೋಕ್ ಕುಮಾರ್ ಕೆ.ಎಸ್ ಮಾತನಾಡಿ ನಮ್ಮ ಸಂಸ್ಥೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ನಮಗೆ ಹೆಮ್ಮೆಯ ವಿಷಯ ಎಂದು ಶುಭ ಹಾರೈಸಿದರು. ಕೆ.ಎಸ್ ಗೌಡ ಸಮೂಹ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳಾದ ಕುಮಾರಸ್ವಾಮಿ ಕೆ.ಎಸ್, ಕೆ.ಎಸ್ ಗೌಡ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಉಮೇಶ ಗೌಡ ಹೆಚ್, ಶ್ರೀ ಪರಿವಾರ ಪಂಚಲಿಂಗೇಶ್ವರ ತಾಂತ್ರಿಕ ತರಬೇತಿ ಕೇಂದ್ರದ ಮುಖ್ಯ ಗುರುಗಳಾದ ದಯಾನಂದ ಕೆ.ಎಸ್, ಶಿಕ್ಷಕ ರಕ್ಷಕ ಸಮಿತಿಯ ಅಧ್ಯಕ್ಷರಾದ ಜಯಪ್ರಕಾಶ್ ಕೆ, ಉಪಾಧ್ಯಕ್ಷರಾದ ಶ್ರೀಮತಿ ಜ್ಯೋತಿ, ಪಂಜ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಜಯಂತ್, ಬ್ಲಾಕ್ ಸಂಪನ್ಮೂಲ ವ್ಯಕ್ತಿ ಸುಬ್ರಹ್ಮಣ್ಯ ಕುದ್ಪಾಜೆ, ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ಮುಖ್ಯ ಶಿಕ್ಷಕರಾದ ಟೈಟಸ್ ವರ್ಗೀಸ್, ಸರ್ಕಾರಿ ಪ್ರೌಢಶಾಲೆ ಎಡಮಂಗಲ ಇದರ ಮುಖ್ಯ ಶಿಕ್ಷಕರಾದ ಅಬ್ದುಲ್ ಖಾದರ್, ಕರ್ನಾಟಕ ಸರ್ಕಾರಿ ನೌಕರರ ಸಂಘದ ಸದಸ್ಯರಾದ ಲಿಂಗಪ್ಪ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
















ಪಂಜ ವಲಯದ ವ್ಯಾಪ್ತಿಗೆ ಒಳಪಡುವ ಹತ್ತು ಪ್ರೌಢಶಾಲೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸರ್ಕಾರಿ ಪ್ರೌಢಶಾಲೆ ಎಣ್ಮೂರು ಪ್ರಥಮ ಸಮಗ್ರ, ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ದ್ವಿತೀಯ ಸಮಗ್ರ ಮತ್ತು ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಸುಬ್ರಹ್ಮಣ್ಯ ತೃತೀಯ ಸಮಗ್ರ ಬಹುಮಾನವನ್ನು ತಮ್ಮದಾಗಿಸಿಕೊಂಡರು.
ಕೆ.ಎಸ್ ಗೌಡ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಉಮೇಶ ಗೌಡ ಹೆಚ್ ಸ್ವಾಗತಿಸಿದರು. ಕೆ.ಎಸ್ ಗೌಡ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚಿತ್ರಕಲಾ ವಿಭಾಗದ ಶಿಕ್ಷಕರಾದ ಮೋಹನ ಕುಮಾರ್ ಕೆ ಮತ್ತು ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜು ವಿಭಾಗದ ಜೀವಶಾಸ್ತ್ರ ಉಪನ್ಯಾಸಕರಾದ ಜೀವನ್ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ವಿಶಾಲಾಕ್ಷಿ ಪಿ ಕಾರ್ಯಕ್ರಮ ನಿರೂಪಿಸಿದರು.










