ರಾಜ್ಯ ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ತು ಸ್ಪರ್ಧೆಯಲ್ಲಿ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿ ಅನುಷ ಕೆ ದ್ವಿತೀಯ ಸ್ಥಾನ

0

ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಪ್ರೌಢಶಾಲಾ ವಿಭಾಗದ ಅನುಷ ಕೆ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಶಿಕ್ಷಣ ಇಲಾಖೆ ಇವರು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯವರ ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಡೆಸಿದ ರಾಜ್ಯಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿ ಸದನದ ನೇತೃತ್ವವನ್ನು ವಹಿಸಿ ರಾಜ್ಯಕ್ಕೆ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ. ಇವರಿಗೆ ಮಾರ್ಗದರ್ಶನವನ್ನು ಶಿಕ್ಷಕರಾದ ಮಮತಾ ಎಂಜೆ ಹಾಗೂ ಸಹ ಶಿಕ್ಷಕರು ನೀಡಿ ಸಹಕರಿಸಿದ್ದಾರೆ.