ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಹಯೋಗದೊಂದಿಗೆ ಸೈಂಟ್ ಬ್ರಿಜಿಡ್ಸ್ ಚರ್ಚ್ ಸುಳ್ಯ ಇಲ್ಲಿ ದಿನಾಂಕ ನ. 30 ರಂದು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮ ಗುರುಗಳಾದ ಆಲ್ವಿನ್ ಡಿಕುನ್ಹರವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದು ಪ್ರಾಸ್ತಾವಿಕ ಮಾತುಗಳನ್ನಾಡಿ ಆರೋಗ್ಯ ತಪಾಸಣಾ ಶಿಬಿರಕ್ಕೆ ಶುಭ ಹಾರೈಸಿದರು. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮಂಗಳೂರು ಇದರ ಹೆಸರಾಂತ ಕ್ಯಾನ್ಸರ್ ತಜ್ಞರಾದ ಡಾ| ಎಲ್ರೋಯ್ ಸಲ್ದಾನರವರು ಕ್ಯಾನ್ಸರ್ ರೋಗದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
















ಇಂಡಿಯನ್ ಕ್ಯಾನ್ಸರ್ ಸೊಸೈಟಿ ಪ್ರಾದೇಶಿಕ ಸಂಯೋಜಕ ರಂಜನ್, ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಶ್ರೀಮತಿ ಕ್ಯಾರೊಲಿನ್ ಸ್ಮಿತಾ, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ನವೀನ್ ಮಚಾದೊ, ಕಾರ್ಯದರ್ಶಿ ಶ್ರೀಮತಿ ಜೂಲಿಯಾ ಕ್ರಾಸ್ತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೈಂಟ್ ಬ್ರಿಜಿಡ್ಸ್ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಆಂಟನಿ ಮೇರಿ ಸ್ವಾಗತಿಸಿ, ಫ್ರಾನ್ಸಿಸ್ ಡಿಸೋಜರವರು ವಂದಿಸಿ, ಶ್ರೀಮತಿ ಪ್ರೆಸಿಲ್ಲ ಪಿಂಟೊರವರು ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ಒಂಬತ್ತು ವಿಭಾಗಗಳಲ್ಲಿ ನುರಿತ ವೈದ್ಯರು ಆರೋಗ್ಯ ತಪಾಸಣೆಯನ್ನು ನಡೆಸಿದರು. ಸುಮಾರು 300 ಜನರು ಇದರ ಸದುಪಯೋಗವನ್ನು ಪಡೆದುಕೊಂಡರು.












