ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಚಿತ್ರಕಲಾ ಪ್ರದರ್ಶನ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮವು ಡಿ.2ರಂದು ಜರಗಿತು.
ಈ ಕಾರ್ಯಕ್ರಮವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ವಾಸವಿ ಪೈಲೂರು ನಡೆಸಿಕೊಟ್ಟರು. ವಿವಿಧ ಪ್ರಕಾರದ ಚಿತ್ರಗಳು ಮತ್ತು ಅವುಗಳನ್ನು ರಚಿಸುವ ಕ್ರಮ ಹಾಗೂ ವರ್ಣಾಲಂಕಾರದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಡಾ. ಚಂದ್ರಶೇಖರ ದಾಮ್ಲೆಯವರು ಮಾತನಾಡಿ ” ಸ್ವ ಪ್ರಯತ್ನದ ಮೂಲಕ ಏನನ್ನಾದರೂ ಕಲಿಯಲು ಸಾಧ್ಯವಿದೆ. ಸಮಯವನ್ನು ಸದುಪಯೋಗ ಮಾಡಿಕೊಳ್ಳಬೇಕು. ಸ್ವ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ನಮ್ಮ ಜ್ಞಾನವನ್ನು ಮತ್ತಷ್ಟು ವಿಸ್ತರಿಸಿಕೊಳ್ಳಲು ಸಾಧ್ಯವಾಗುತ್ತದೆ. ಇಂತಹ ಸಾಧನೆಯನ್ನು ನಮ್ಮ ಶಾಲೆಯ ಹಿರಿಯ ವಿದ್ಯಾರ್ಥಿನಿ ಕುಮಾರಿ ವಾಸವಿ ಪೈಲೂರು ಇವರು ಮಾಡಿದ್ದಾರೆ” ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಕ್ಷರ ದಾಮ್ಲೆ, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಕಿ ಶ್ರೀಮತಿ ಸವಿತಾ ಎಂ ಸ್ವಾಗತಿಸಿ, ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಯವರು ವಂದಿಸಿದರು.