ಗ್ರಾಮ ಪಂಚಾಯತ್ ಅಜ್ಜಾವರ, ಅರಿವು ಕೇಂದ್ರ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಅಜ್ಜಾವರ ಹಾಗೂ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ -ಪೆರುವಾಜೆ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಇವರು ಗಳ ಸಹಯೋಗದಲ್ಲಿ “ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವು ಶ್ರೀ ಮತಿ ದೇವಕಿಯಯಯವರ ಅಧ್ಯಕ್ಷತೆಯಲ್ಲಿ ನಡೆಯಿತು.
















ದೀಪ ಬೆಳಗಿಸಿ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರು ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಮಗಮಿಸಿದ ಶ್ರೀಮತಿ ಗೀತಾಂಜಲಿ ಸಂಚಾಲಕರು, ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸುಳ್ಯ ರವರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಮಗ್ರ ಕೌಸಲ್ಯ ವಿಕಾಸ ಇದರ ಬಗ್ಗೆ ಮಾಹಿತಿಯನ್ನು ನೀಡಿದರು. ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ಲ ಎ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲಾ ಎ. ಕೆ. ಗ್ರಂಥಾಲಯ ಸಮಿತಿ ಸದಸ್ಯರಾದ ಶಶ್ಮಿ ಭಟ್ ಅಜ್ಜಾವರ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅಜ್ಜಾವರ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಸ್ಮರಣಾ ಶಕ್ತಿ, ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರಥಮ, ದ್ವಿತೀಯ ಮತ್ತು ಸಮಾಧಾನಕರ ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಳ್ಯ ಅಟ್ಲೂರು ಶಾಲೆ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಚಂದ್ರಶೇಖರ, ಸುಳ್ಯ ತಾಲೂಕು ಗ್ಯಾರಂಟಿ ಸದಸ್ಯರಾದ ಅಬ್ಬಾಸ್, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಂಥಾಲಯ ಸಮಿತಿ ಸದಸ್ಯರಾದ ಬೆಳ್ಯಪ್ಪ ಮುಡೂರು,ಗ್ರಂಥಾಲಯ ಮೇಲ್ವಿಚಾರಕಿ ಲಕ್ಷ್ಮಿ, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಪ್ರಾರ್ಥನೆಯನ್ನು ದಿಶಾ ಮುಳ್ಯ ಅಟ್ಲೂರು, ಸ್ವಾಗತ ಡಿಂಪಲ್.ಎನ್.ಡಿ, ಕಾರ್ಯಕ್ರಮದ ನಿರೂಪಣೆಯನ್ನು, ಜ್ಯೋತಿ. ಬಿ. ಎಚ್, ಧನ್ಯವಾದವನ್ನು VRW ಉಮ್ಮರ್.ಬಿ.ಯವರು ನೆರವೇರಿಸಿದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು










