ಸ್ವರ್ಣಂ ಜ್ಯುವೆಲ್ಲರ್ಸ್ ನವರ 2026 ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ

0

ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸುಂತೋಡು ಎಂಪೋರಿಯಂ ಲ್ಲಿರುವ ಸ್ವರ್ಣಂ ಜ್ಯುವೆಲ್ಲರ್ ನಲ್ಲಿ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಡಿ. 2ರಂದು ನಡೆಯಿತು.

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥರವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭ ಬಿಲ್ಡಿಂಗ್ ಮಾಲಕ ಸೂರಯ್ಯ ಸುಂತೋಡು, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಸಂಸ್ಥೆಯ ಆಡಳಿತ ಪಾಲುದಾರರಾದ ಪ್ರವೀಣ್ ಬಿ. ಗೌಡ, ಸಂಜೀವ, ಲೋಕೇಶ್, ಭವಿತ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.