ಉಬರಡ್ಕ:ಕೋಟೆ ಫೌಂಡೇಶನ್ ವತಿಯಿಂದ ಕೊಡುಗೆ

0

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ಅಂಗನವಾಡಿ ಕೇಂದ್ರದ ಮಕ್ಕಳಿಗೆ ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಬ್ಯಾಗ್ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಬಾಲವಿಕಾಸ ಅಧ್ಯಕ್ಷೆ ಶ್ರೀಮತಿ ನಳಿನಾಕ್ಷಿ, ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಶ್ರೀಮತಿ ಚಿತ್ರಾವತಿ, ಕೋಟೆ ಫೌಂಡೇಶನ್ ಪ್ರತಿನಿಧಿ ಪ್ರದೀಪ್ ಹುಳಿಯಡ್ಕ, ನಿವೃತ ಅಂಗನವಾಡಿ ಕಾರ್ಯಕರ್ತೆ ಪ್ರೇಮಕಲಾ ಹಾಗೂ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು.