ಸುಳ್ಯ ಶ್ರೀ ಶಾರದಾ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ

0

ಸಂಸ್ಕಾರಯುತ ಶಿಕ್ಷಣ ಇಂದಿನ ಅಗತ್ಯ : ಡಾ.ಪ್ರಭಾತ್ ಬಲ್ನಾಡ್

“ಪುಸ್ತಕದಲ್ಲಿನ ಶಿಕ್ಷಣದ ಜತೆಗೆ ಮನೆಯಲ್ಲಿ ಪೋಷಕರು, ಶಾಲೆಯಲ್ಲಿ ಗುರುಗಳು ನೀಡುವ ಸಂಸ್ಕಾರದ ಶಿಕ್ಷಣ ಇಂದಿನ ಅಗತ್ಯ. ಪ್ರತಿಯೊಬ್ಬರೂ ಜೀವನೋತ್ಸಾಹದೊಂದಿಗೆ ನಡೆದಾಗ ಗುರಿ ತಲುಪಲು ಸಾಧ್ಯ” ಎಂದು ಮೂಡಬಿದಿರೆ ಜೈನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭಾತ್ ಬಲ್ನಾಡ್ ಹೇಳಿದರು.

ಡಿ.3ರಂದು ಸುಳ್ಯದ‌ ಶ್ರೀ ಶಾರದಾ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಇದರ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಅಧ್ಯಕ್ಷತೆ ವಹಿಸಿದ್ದರು.

ದ.ಕ. ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ.ರೇವತಿ ನಂದನ್, ಕೋಶಾಧಿಕಾರಿ ಮಾಧವ ಗೌಡ ಬೆಳ್ಳಾರೆ, ನಿರ್ದೇಶಕ ‌ಜಯರಾಮ‌ ಚಿಲ್ತಡ್ಕ, ವಿದ್ಯಾರ್ಥಿ‌ ನಾಯಕರಾದ ಜೊಯಸ್ಟನ್ ಕ್ರಾಸ್ತ, ಷೇಕ್ ಮಹಮ್ಮದ್ ಪಾಯಿಝ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಶಿಕಾ ಕೇಶವ್, ಪ.ಪೂ. ವಿಭಾಗದ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ರೇಖಾ, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ‌ಮಹೇಶ್ ವೇದಿಕೆಯಲ್ಲಿ ಇದ್ದರು.
ವಾರ್ಷಿಕೋತ್ಸವ ಅಂಗವಾಗಿ ನಡೆದ ಕ್ರೀಡಾಕೂಟದ ಬಹುಮಾನ ವಿತರಣೆ ನಡೆಯಿತು. ಶೈಕ್ಷಣಿಕ ಸಾಧಕರನ್ನು ಗೌರವಿಸಲಾಯಿತು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ದಯಾಮಣಿ ಕೆ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭಾರತಿ ಪಿ. ವಾರ್ಷಿಕ ವರದಿ ಮಂಡಿಸಿದರು.
ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್. ಅತಿಥಿಗಳನ್ನು ಪರಿಚಯಿಸಿದರು. ಅಧ್ಯಾಪಕರಾದ ಶ್ರೀಮತಿ ಅರ್ಪಣ ವಂದಿಸಿದರು.
ವಿದ್ಯಾರ್ಥಿನಿ ಶ್ರೀವಲ್ಲಿ ಮತ್ತು ಕಿಶನ್ ಬಿ. ಕಾರ್ಯಕ್ರಮ ನಿರೂಪಿಸಿದರು.