ಎಡಮಂಗಲ ಶಾಲೆಯಲ್ಲಿ ಕ್ರೀಡಾಪಟು ಶ್ರೀಮತಿ ರಂಜಿನಿಯವರಿಗೆ ಗೌರವ

0

ಎಡಮಂಗಲ ಶಾಲೆಯ ಹಿರಿಯ ವಿದ್ಯಾರ್ಥಿನಿ ಪ್ರಸ್ತುತ ಮುರುಳ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಮತಿ ರಂಜಿನಿಯವರು ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ದಿನವಾದ ಡಿ. 3 ರಂದು ಅವರು ಕಲಿತ ಪ್ರಾಥಮಿಕ ಶಾಲೆಯಲ್ಲಿ ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷ ಭಾಸ್ಕರ ಆಚಾರ್ಯ ಮತ್ತು ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.