ಪಂಜ: ಭಕ್ತಿ ಸಡಗರದಿಂದ ನಡೆದ ಶ್ರೀ ಕಾಚು ಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಮೂಲ ಸ್ಥಾನದಲ್ಲಿ ಶ್ರೀ ಕಾಚುಕುಜುಂಬ ದೈವದ ದೈವಸ್ಥಾನ ಪುನ: ನಿರ್ಮಾಣ ಗೊಂಡು ಪುನಃ ಪ್ರತಿಷ್ಠಾ ಕಲಶ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ. 05 ರಂದು ಮುಂಜಾನೆ 10: 29ರಿಂದ 11:30ರ ತನಕದ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠೆ ಭಕ್ತಿ ಸಡಗರದಿಂದ ನಡೆಯಿತು.
ಪೂರ್ವಾಹ್ನ ಮಹಾಗಣಪತಿ ಹೋಮ, ಕಲಶ ಪೂಜೆ , ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ,ತಂಬಿಲ ಸೇವೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ಕಾಚು ಕುಜುಂಬ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪರಮೇಶ್ವರ ಬಿಳಿಮಲೆ, ಕಾರ್ಯದರ್ಶಿ ಆನಂದ ಗೌಡ ಜಳಕದಹೊಳೆ,ಉಪಾಧ್ಯಕ್ಷ ಉಮೇಶ್ ಬುಡೆಂಗಿ ಬಳ್ಪ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ ಕಾಯಂಬಾಡಿ, ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೆಟಿ, ಶ್ರೀಮತಿ ಮಾಲಿನಿ ಕುದ್ವ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ, ಉದಯ ಕುಮಾರ್ ಬೆಟ್ಟ, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.