ಡಿ. ೦6 : ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

0

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಕೆ.ಆರ್. ಗಂಗಾಧರ್ ಮತ್ತು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಕೆ. ಆರ್. ಗಂಗಾಧರ್ ಮತ್ತು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮವು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ಡಿ. ೬ರಂದು ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರಾದ ಡಾ. ಚಿದಾನಂದ .ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಂಸ್ಥೆಯ ಆಡಳಿತ ಮಂಡಳಿ ಪ್ಯಾಪುಲರ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ದಿವಾಕರ್ ರೈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಸರ್ಕಾರಿ ಪದವಿ ಕಾಲೇಜು , ಪುತ್ತೂರು ಪ್ರಾಂಶುಪಾಲರಾದ ಪ್ರೊಫೆಸರ್ ಸುಬ್ಬಪ್ಪ ಕೈಕಂಬ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಅರಂತೋಡು ಗ್ರಾಮ ಪಂಚಾಯಿತ್ ಅಧ್ಯಕ್ಷ ಕೇಶವ ಆಡ್ತಲೆ, ಸಂಸ್ಥೆಯ ಸಂಚಾಲಕ ಎ.ಸಿ.ವಸಂತ ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ಅರೆ ಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಗಾಧರ್, ವಿಶ್ರಾಂತ ಪ್ರಾಂಶುಪಾಲರಿಗೆ ಮತ್ತು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರತಿನಿಧಿಸಿದ ಹೆಮ್ಮೆ ವಿದ್ಯಾರ್ಥಿಗಳಾದ ಕೃತಿ ಕೆ.ಎಸ್., ಸುಮ ಕೆ.ಆರ್, ದೀಪ್ತಿ ಕೆ ಸಿ, ಚಂದನಾ,ಜಸ್ಮಿತಾ, ಚಿಂತನಾ, ಶ್ರವಣ್, ಚರಿಷ್ಮಾ ಅವರಿಗೆ ಅಭಿನಂದನಾ ಸನ್ಮಾನ ನಡೆಯಲಿದೆ. ಸಮಾರಂಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಸಾಧಕರಿಗೆ ದತ್ತಿನಿಧಿಗಳ ಪ್ರಶಸ್ತಿ ಪುರಸ್ಕಾರಗಳು, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಸಂಜೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಲೋಕೇಶ್ ಊರುಬೈಲ್ ನಿರ್ದೇಶನದ ಅರೆ ಭಾಷೆ ನಾಟಕ “ಅಪ್ಪ” ಪ್ರದರ್ಶನ ನಡೆಯಲಿದೆ.